ನವದೆಹಲಿ: ‘₹4.56 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಆರು ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇವರು ಆಂಧ್ರಪ್ರದೇಶದ ವಿಜಯವಾಡ ಹಾಗೂ ಗುಂಟೂರಿನವರು’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

‘ಆರೋಗ್ಯ ಭದ್ರತಾ ಯೋಜನೆಯ ಕಾರ್ಯದರ್ಶಿ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಶಾಖೆಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದರು. ಆ ಖಾತೆಗಳಿಗೆ ತಲಾ ₹ 90 ಲಕ್ಷ ಜಮೆ ಮಾಡಿದ್ದರು. ಮತ್ತೊಂದು ಖಾತೆಗೆ ₹68.84 ಲಕ್ಷ ಹಾಕಿದ್ದರು. ಈ ಆರು ಮಂದಿ ಅಧಿಕಾರಿಗಳು ಖಾತೆದಾರರ ಅನುಮತಿಯಿಲ್ಲದೆಯೇ ಅಷ್ಟೂ ಹಣವನ್ನು ಅನಾಮಧೇಯ ಖಾತೆಗಳಿಗೆ ವರ್ಗಾಯಿಸಿದ್ದರು. ಬಳಿಕ ಕಾರ್ಯದರ್ಶಿಯ ಗಮನಕ್ಕೂ ತರದೆ ಅವರ ನಾಲ್ಕು ಖಾತೆಗಳನ್ನು ರದ್ದುಗೊಳಿಸಿದ್ದರು’ ಎಂದು ಸಿಬಿಐ ವಕ್ತಾರ ಆರ್.ಸಿ.ಜೋಷಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.