ಜಮ್ಮು: ನಂಬಿಕೆ ದ್ರೋಹ ಮತ್ತು ಭ್ರಷ್ಟಾಚಾರ ಆರೋಪದಡಿ ಜಮ್ಮು ಮತ್ತು ಕಾಶ್ಮೀರದಮಾಜಿ ಸಚಿವ ಲಾಲ್‌ಸಿಂಗ್ ಕುಟುಂಬದವರು ಸದಸ್ಯರಾಗಿರುವ ಕಥುವಾ ಮೂಲದ ಶಿಕ್ಷಣ ಸಂಸ್ಥೆಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಮಾಜಿ ಸಚಿವರ ಕುಟುಂಬದ ಸದಸ್ಯರಿರುವ ಆರ್‌ಬಿ ಶಿಕ್ಷಣ ಸಂಸ್ಥೆಯ ವಿರುದ್ಧ ಭ್ರಷ್ಟಚಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಸ್ಥೆಯ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಲಾಲ್‌ಸಿಂಗ್ ಪತ್ನಿ ಮತ್ತು ಅವರ ಮಗ ಸೇರಿದಂತೆ ಇತರೆ ಸರ್ಕಾರಿ ಅಧಿಕಾರಿಗಳಹೆಸರಿದೆ. ಅಲ್ಲದೆ ಹಗರಣ ನಡೆದ ವೇಳೆಯಲ್ಲಿ ಅಧಿಕಾರದಲಿದ್ದ ಕಥುವಾ ನಗರದ ಉಪ ಆಯುಕ್ತರು ಹೆಸರೂ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಜಮ್ಮುವಿನ ಮೂರು ಮತ್ತು ಕಠುವಾ ಜಿಲ್ಲೆಯ 9 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.