ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಸ್ರೊ ಬೇಹುಗಾರಿಕೆ ಪ್ರಕರಣ: ಐವರ ವಿರುದ್ಧ ಸಿಬಿಐ ಆರೋಪಪಟ್ಟಿ

Published 26 ಜೂನ್ 2024, 19:38 IST
Last Updated 26 ಜೂನ್ 2024, 19:38 IST
ಅಕ್ಷರ ಗಾತ್ರ

ತಿರುವನಂತಪುರ: 1984ರ ಇಸ್ರೊ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಐವರ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ದಾಖಲಿಸಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ, ಯಾರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ ಎಂಬ ವಿವರಗಳು ತಕ್ಷಣಕ್ಕೆ ಗೊತ್ತಾಗಿಲ್ಲ ಎಂದೂ ಮೂಲಗಳು ಹೇಳಿವೆ.

ಈ ಪ್ರಕರಣದಲ್ಲಿ ಬಾಹ್ಯಾಕಾಶ ವಿಜ್ಞಾನಿ ನಂಬಿ ನಾರಾಯಣನ್‌ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್‌ 2021ರ ಏಪ್ರಿಲ್‌ 15ರಂದು ಆದೇಶಿಸಿತ್ತು. ನಂಬಿ ನಾರಾಯಣನ್‌ ವಿರುದ್ಧದ ಆರೋಪಗಳು ಸುಳ್ಳು ಎಂಬುದು ಸಿಬಿಐ ತನಿಖೆಯಿಂದ ತಿಳಿದುಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT