ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ಖಾಲಿ ಪ್ರಕರಣ: ಸಿಬಿಐನಿಂದ ಮೊದಲ ಎಫ್‌ಐಆರ್‌ ದಾಖಲು

Published 25 ಏಪ್ರಿಲ್ 2024, 14:16 IST
Last Updated 25 ಏಪ್ರಿಲ್ 2024, 14:16 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಐವರು ಪ್ರಭಾವಿ ವ್ಯಕ್ತಿಗಳ ವಿರುದ್ಧ ಭೂಕಬಳಿಕೆ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಎಫ್‌ಐಆರ್‌ ದಾಖಲಿಸಿದೆ.

ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇದೇ ಮೊದಲ ಬಾರಿಗೆ ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐವರೂ ಆರೋಪಿಗಳ ಗುರುತನ್ನು ಸಿಬಿಐ ಬಹಿರಂಗಪಡಿಸಿಲ್ಲ.

ಸ್ಥಳೀಯ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಹಾಗೂ ಬಲವಂತವಾಗಿ ಭೂಮಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ಸಂದೇಶ್‌ಖಾಲಿ ಜನರು ತೀವ್ರ ಪ್ರತಿಭಟನೆ ನಡೆಸಿದ್ದರು. ಬಳಿಕ ಘಟನೆ ಕುರಿತು ತನಿಖೆ ನಡೆಸುವಂತೆ ಏ.10ರಂದು ಕಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ಆದೇಶ ನೀಡಿತ್ತು. ಅಲ್ಲದೇ ಪ್ರಕರಣದ ಕುರಿತು ಸಂಪೂರ್ಣ ವರದಿಯನ್ನು ಮೇ 2ರಂದು ಸಲ್ಲಿಸುವಂತೆ ನಿರ್ದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT