ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ನಾಲ್ಕನೇ ಆರೋಪಪಟ್ಟಿ ಸಲ್ಲಿಸಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಬಿಜೆಪಿ ಕಾರ್ಯಕರ್ತನನ್ನು ತೃಣಮೂಲ ಕಾಂಗ್ರೆಸ್ ಸದಸ್ಯರು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಡಿಯಾ ಜಿಲ್ಲೆಯ ಕೃಷ್ಣನಗರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಮೇ 2ರಂದು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಕಾರ್ಯಕರ್ತನ ಹತ್ಯೆಯಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿಗಳ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ.

ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಕಳೆದ ತಿಂಗಳು ಸಿಬಿಐಗೆ ಸೂಚಿಸಿತ್ತು.

ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ನಡೆದ ಕೊಲೆಗಳು ಮತ್ತು ಇತರ ಘೋರ ಅಪರಾಧಗಳಿಗೆ ಸಂಬಂಧಿಸಿದಂತೆ ಸಿಬಿಐ ಇಲ್ಲಿಯವರೆಗೆ 34 ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಉತ್ತರ 24 ಪರಗಣಗಳ ಭಟ್ಪಪರಾ ಮತ್ತು ಬಿರ್ಭುಮ್ ಜಿಲ್ಲೆಯ ನಲ್ಹಾಟಿ ಮತ್ತು ರಾಮಪುರ್ಹತ್‌ನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ವಿವಿಧ ನ್ಯಾಯಾಲಯಗಳಲ್ಲಿ ಮೂರು ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿದೆ.

ಕನಸನ್ನು ನನಸು ಮಾಡಿಕೊಂಡ ಚಿನ್ನದ ಹುಡುಗ ನೀರಜ್ ಚೋಪ್ರಾ: ಭಾವನಾತ್ಮಕ ಟ್ವೀಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.