ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗಣಿಗಾರಿಕೆ ಪ್ರಕರಣ: ಅಖಿಲೇಶ್‌ ಯಾದವ್‌ಗೆ ಸಮನ್ಸ್‌ ಜಾರಿ ಮಾಡಿದ ಸಿಬಿಐ

Published 28 ಫೆಬ್ರುವರಿ 2024, 10:50 IST
Last Updated 28 ಫೆಬ್ರುವರಿ 2024, 10:50 IST
ಅಕ್ಷರ ಗಾತ್ರ

ನವದಹೆಲಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ 5 ವರ್ಷದ ಹಿಂದೆ ದಾಖಲಾದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದ್ದು, ಗುರುವಾರ (ನಾಳೆ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸಿಆರ್‌ಪಿಸಿ ಸೆಕ್ಷನ್ 160ರಡಿ ನೋಟಿಸ್‌ ಜಾರಿ ಮಾಡಿದ್ದು, ಫೆ. 29ಕ್ಕೂ ಮುನ್ನ ಸಿಬಿಐ ಅಧಿಕಾರಿಗಳ ಎದುರು ಹಾಜರಾಗುವಂತೆ ತಿಳಿಸಿದೆ.

ಅಖಿಲೇಶ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ 2012 ರಿಂದ 2016ರ ವರೆಗೆ ಅಕ್ರಮವಾಗಿ ಗಣಿಗಾರಿಕೆಗೆ ಪರವಾನಿಗೆ ನೀಡಿದ್ದರು. ಇದರಿಂದಾಗಿ ಅಧಿಕಾರಿಗಳು ಖನಿಜಗಳ ಕಳ್ಳತನ, ಗುತ್ತಿಗೆದಾರರು ಮತ್ತು ಚಾಲಕರಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್‌ ಹೈಕೋರ್ಟ್‌ನ ಆದೇಶದ ಮೇರೆಗೆ 2016ರಲ್ಲಿ ಸಿಬಿಐ ಏಳು ಪ್ರಾಥಮಿಕ ತನಿಖೆಯನ್ನು ನಡೆಸಿತ್ತು. ಅಲ್ಲದೆ ಅಖಿಲೇಶ್‌ ಅವರಿದ್ದಾಗ ಒಂದೇ ದಿನ 13 ಯೋಜನೆಗಳಿಗೆ ಮುಖ್ಯಮಂತ್ರಿ ಕಚೇರಿ ಅನುಮತಿ ನೀಡಿ,ಇ– ಟೆಂಡರ್‌ ನಿಯಮಗಳನ್ನು ಉಲ್ಲಂಘಿಸಿತ್ತು ಎಂದೂ ಆರೋಪ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT