ಅನಿಲ್ ದೇಶಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ವೀರ್ ಸಿಂಗ್ ಭ್ರಷ್ಟಾಚಾರ ಆರೋಪ ಮಾಡಿದ್ದರು. ಅದಾಗಿ ಕೆಲವು ದಿನಗಳ ಬಳಿಕ ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ದೇಶಮುಖ್ ರಾಜೀನಾಮೆ ನೀಡಿದ್ದರು. ಪ್ರತಿ ತಿಂಗಳೂ ₹100 ಕೋಟಿ ಲಂಚ ಸಂಗ್ರಹಿಸುವಂತೆ ಅಮಾನತುಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಸೂಚಿಸಿದ್ದರು ಎಂದು ಪರಮ್ ವೀರ್ ಸಿಂಗ್ ಆರೋಪಿಸಿದ್ದರು.