ಮುಂಬೈ: ಭ್ರಷ್ಟಾಚಾರವನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ನೀತಿಯ ಭಾಗವಾಗಿ ಕೇಂದ್ರೀಯ ತನಿಖಾ ದಳವು (ಸಿಬಿಐ) ತನ್ನದೇ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ಅವರ ಬಳಿಯಿದ್ದ ಶಂಕಿತ ಅಕ್ರಮ ನಗದು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದೆ.

ತನಿಖೆಯ ಭಾಗವಾಗಿ ಮುಂಬೈ, ದೆಹಲಿ, ಜೈಪುರ ಮತ್ತು ಕೊಲ್ಕತ್ತ ಸೇರಿದಂತೆ 20ಕ್ಕೂ ಅಧಿಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಈ ವೇಳೆ ಸಿಬಿಐನ ಬ್ಯಾಂಕ್ ಭದ್ರತೆ ಮತ್ತು ವಂಚನೆ ದಳದ ಪೊಲೀಸ್ ಉಪ ಅಧೀಕ್ಷಕರಾಗಿರುವ ಬಿ.ಎಮ್ ಮೀನಾ ಹಾಗೂ ಇತರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ₹55 ಲಕ್ಷ ನಗದು, ₹1.78 ಕೋಟಿ ಮೌಲ್ಯದ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಂಸ್ಥೆಯು ತನಿಖೆ ನಡೆಸುತ್ತಿರುವ ಪ್ರಕರಣಗಳಲ್ಲಿರುವ ಬೇರೆ ಬೇರೆ ವ್ಯಕ್ತಿಗಳಿಂದ ಅಕ್ರಮವಾಗಿ ಈ ಅಧಿಕಾರಿಗಳು ಲಾಭ ಪಡೆದುಕೊಂಡಿದ್ದಾರೆ. ವಿವಿಧ ಮಧ್ಯವರ್ತಿ ಸೇವೆಗಳನ್ನು ಬಳಸಿಕೊಂಡು, ಅಧಿಕಾರಿಗಳು ಲಂಚದ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ ಎಂದು ಸಿಬಿಐ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.