ನವದೆಹಲಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ₹228 ಕೋಟಿ ವಂಚನೆ ಪ್ರಕರಣ ಸಂಬಂಧ ಉದ್ಯಮಿ ಅನಿಲ್ ಅಂಬಾನಿ ಅವರ ಪುತ್ರ ಜಯ್ ಅನ್ಮೋಲ್ ಅಂಬಾನಿ ಅವರನ್ನು ಸಿಬಿಐ ಅಧಿಕಾರಿಗಳು ಸತತ ಎರಡನೇ ದಿನವಾದ ಶನಿವಾರ ಐದು ಗಂಟೆ ವಿಚಾರಣೆ ನಡೆಸಿದ್ದಾರೆ.

‘ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ನ (ಆರ್ಎಚ್ಎಫ್ಎಲ್) ಮಾಜಿ ನಿರ್ದೇಶಕ ಜಯ್ ಅನ್ಮೋಲ್ ಅಂಬಾನಿ ಅವರನ್ನು ಇಲ್ಲಿನ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಲಾಯಿತು. ಈ ಪ್ರಕರಣದಲ್ಲಿ ಆರ್ಎಚ್ಎಫ್ಎಲ್ನ ಮಾಜಿ ಸಿಇಒ ಮತ್ತು ಪೂರ್ಣಾವಧಿ ನಿರ್ದೇಶಕ ರವೀಂದ್ರ ಸುಧಾಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜಯ್ ಅನ್ಮೋಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ, 2025ರ ಡಿಸೆಂಬರ್ 9ರಂದು ಸಿಬಿಐ ಅಧಿಕಾರಿಗಳು ಅನ್ಮೋಲ್ ಅವರ ನಿವಾಸದ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.