ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿ ಚಿದಂಬರಂ ಪ್ರಕರಣ: ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

Last Updated 17 ಮೇ 2022, 4:25 IST
ಅಕ್ಷರ ಗಾತ್ರ

ಚೆನ್ನೈ: ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ಶಿವಗಂಗಾ ಸೇರಿದಂತೆ ದೇಶದ 7 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಸಿಬಿಐ ದಾಳಿಯನ್ನು ಕಾರ್ತಿ ಚಿದಂಬರಂ ಕಚೇರಿ ಖಚಿತಪಡಿಸಿದೆ.

ಮೂಲಗಳ ಪ್ರಕಾರ, ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯು 2010–14ರ ನಡುವೆ ವಿದೇಶಕ್ಕೆ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಅವರ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ, ನನ್ನ ಮೇಲೆ ಎಷ್ಟು ಬಾರಿ ದಾಳಿ ನಡೆದಿದೆ ಎಂಬುದರ ಲೆಕ್ಕವೇ ಸಿಗುತ್ತಿಲ್ಲ. ಈ ಬಗ್ಗೆ ದಾಖಲಾತಿ ಇಡಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT