ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಕಳವು ಪ್ರಕರಣ: CISF ನಿವೃತ್ತ ಅಧಿಕಾರಿಗಳ ನಿವಾಸದಲ್ಲಿ ಸಿಬಿಐ ಶೋಧ

Published 14 ಡಿಸೆಂಬರ್ 2023, 13:44 IST
Last Updated 14 ಡಿಸೆಂಬರ್ 2023, 13:44 IST
ಅಕ್ಷರ ಗಾತ್ರ

ಕೋಲ್ಕತ್ತ: ಕಲ್ಲಿದ್ದಲು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಇಬ್ಬರು ನಿವೃತ್ತ ಅಧಿಕಾರಿಗಳಿಗೆ ಸೇರಿದ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಸಿಬಿಐ ಗುರುವಾರ ಶೋಧ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.

ರಾಜಧಾನಿ ಕೋಲ್ಕತ್ತ, ಅನ್ಸೋಲ್, ದುರ್ಗಾಪುರ, ಕುಲ್ಟಿ, ಮಾಲದಾ ಸೇರಿದಂತೆ 12 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದರು ಎಂದು ತಿಳಿಸಿದರು.

ನಿವೃತ್ತ ಅಧಿಕಾರಿಗಳು ಕಲ್ಲಿದ್ದಲು ಕಳವಿಗೆ ನೆರವು ನೀಡಿ ಆರ್ಥಿಕವಾಗಿ ಅನುಕೂಲ ಪಡೆದಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿತ್ತು.  ಶೋಧ ಕಾರ್ಯಾಚರಣೆ ವೇಳೆ ನಿವೃತ್ತ ಅಧಿಕಾರಿಗಳು ಮತ್ತು ಅವರ ಕುಟುಂಬಸ್ಥರ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದು, ಆಸ್ತಿ ಮತ್ತು ಬ್ಯಾಂಕ್‌ ಖಾತೆಗಳಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ವಶಕ್ಕೆ ಪಡೆಯಲಾಯಿತು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT