ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಅಕ್ರಮ: ಪ.ಬಂಗಾಳ ಸಚಿವ ಫಿರ್ಹಾದ್ ಹಕೀಮ್ ನಿವಾಸದಲ್ಲಿ ಸಿಬಿಐ ಶೋಧ

ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ ಅಕ್ರಮ ಆರೋಪ
Published 8 ಅಕ್ಟೋಬರ್ 2023, 5:10 IST
Last Updated 8 ಅಕ್ಟೋಬರ್ 2023, 5:10 IST
ಅಕ್ಷರ ಗಾತ್ರ

ಕೋಲ್ಕತ್ತ: ಸ್ಥಳೀಯ ಸಂಸ್ಥೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿ ಪಶ್ಚಿಮ ಬಂಗಾಳದ ಸಚಿವ ಫಿರ್ಹಾದ್ ಹಕೀಮ್ ಅವರ ಕೋಲ್ಕತ್ತದ ನಿವಾಸಕ್ಕೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಭಾನುವಾರ ಶೋಧ ನಡೆಸಿದ್ದಾರೆ.

ನಗರಾಭಿವೃದ್ಧಿ ಮತ್ತು ನಗರಪಾಲಿಗೆ ಸಚಿವ ಫಿರ್ಹಾದ್ ಹಕೀಮ್ ಅವರು ಕೋಲ್ಕತ್ತದ ಮೇಯರ್ ಕೂಡ ಆಗಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಆಗಿರುವ ಹಕೀಮ್ ಪಕ್ಷದ ಸಂಘಟನೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ.

ಸಿಬಿಐ ತಂಡ ಹಕೀಮ್ ನಿವಾಸಕ್ಕೆ ದಾಳಿ ಮಾಡಿದ್ದು, ಇಬ್ಬರು ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ಮಾಹಿತಿ ನೀಡಿದೆ.

ಸಿಬಿಐ ಶೋಧ ಖಂಡಿಸಿ ಹಕೀಮ್ ಬೆಂಬಲಿಗರು ಅವರ ನಿವಾಸದ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT