ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಶಹಜಹಾನ್ ಶೇಖ್ ಮನೆಯಲ್ಲಿ ಸಿಬಿಐ ಶೋಧ

Published 8 ಮಾರ್ಚ್ 2024, 7:24 IST
Last Updated 8 ಮಾರ್ಚ್ 2024, 7:24 IST
ಅಕ್ಷರ ಗಾತ್ರ

ಕೋಲ್ಕತ್ತ: ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಶುಕ್ರವಾರ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇ.ಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ಸಂದೇಶ್‌ಖಾಲಿಯಲ್ಲಿರುವ ನಿವಾಸದಲ್ಲಿ ಶೋಧ ಕಾರ್ಯ ನಡೆದಿದೆ ಎಂದು ವರದಿಯಾಗಿದೆ.

ದಾಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಸಿಬಿಐ ಸರ್ಬೇರಿಯಾದ ಅಕುಂಚಿಪಾರಾ ಪ್ರದೇಶದ ಅವರ ಮನೆಯ ಸಮೀಪವಿರುವ ಪ್ರದೇಶಗಳಿಗೂ ಭೇಟಿ ನೀಡಿದೆ. ಸಿಬಿಐ ತಂಡದಲ್ಲಿ ಫೋರೆನ್ಸಿಕ್ ಮತ್ತು ಇ.ಡಿ ಅಧಿಕಾರಿಗಳು ಸಹ ಇದ್ದಾರೆ.

ಪ್ರಕರಣದ ಹಿನ್ನೆಲೆ:

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿ ಶಹಜಹಾನ್‌ ಶೇಖ್‌ ನಿವಾಸದಲ್ಲಿ ಇ.ಡಿ ಅಧಿಕಾರಿಗಳು ಜನವರಿ 5ರಂದು ದಾಳಿ ನಡೆಸಿದ್ದರು. ಆ ವೇಳೆ ಶೇಖ್‌ ಬೆಂಬಲಿಗರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. ದಾಳಿಯಲ್ಲಿ ಮೂವರು ಅಧಿಕಾರಿಗಳು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT