ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ಸೇರಿದಂತೆ ಕುಖ್ಯಾತ ಕೈದಿಗಳಿಂದ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಪ್ರಕರಣ ದಾಖಲಿಸಲು ಲೆಫ್ಟಿನೆಂಟ್ ಗರ್ವನರ್ ಅನುಮತಿ ನೀಡಬೇಕು ಎಂದು ಸಿಬಿಐ ಮನವಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ‘ಪೊಲೀಸ್ ಮಹಾ ನಿರ್ದೇಶಕ (ಕಾರಾಗೃಹ) ಸಂದೀಪ್ ಗೋಯಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾರಾಗೃಹ) ಮುಕೇಶ್ ಪ್ರಸಾದ್ ಮತ್ತಿತರ ಅಧಿಕಾರಿಗಳ ಪರೋಕ್ಷ ಸಮ್ಮತಿಯಿಂದ ಕಾರಾಗೃಹಗಳಲ್ಲಿ ಭಾರಿ ಭ್ರಷ್ಟಾಚಾರ ಮತ್ತು ಸುಲಿಗೆ ಅವ್ಯಾಹತವಾಗಿ ನಡೆಯುತ್ತಿತ್ತು. ಹೀಗಾಗಿ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕು’ ಎಂದು ಕೋರಿದೆ.
ವಂಚಕ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿ ವಿವಿಧ ಸೌಲಭ್ಯಗಳನ್ನು ಪಡೆಯಲು ಜೈನ್ ಅವರಿಗೆ 2018–21ರ ಅವಧಿಯಲ್ಲಿ ವಿವಿಧ ಕಂತುಗಳಲ್ಲಿ ₹10 ಕೋಟಿ ನೀಡಿದ್ದಾನೆ ಎಂದು ಮೂಲಗಳು ಮಾಹಿತಿ ನೀಡಿವೆ ಎಂದೂ ಸಿಬಿಐ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.