ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗೆ 53 ಅಧಿಕಾರಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪಟ್ಟಿಯಲ್ಲಿ ವಿವಿಧ ಶ್ರೇಣಿಯ 29 ಮಹಿಳಾ ಅಧಿಕಾರಿಗಳು ಸೇರಿದ್ದಾರೆ.
ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರ ಪ್ರಕರಣಗಳನ್ನು ಲವ್ಲಿ ಕಟಿಯಾರ್ ಹಾಗೂ ನಿರ್ಮಲಾ ದೇವಿ ಅವರನ್ನು ಸೇರಿದಂತೆ ಮೂವರು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಗಳ ನೇತೃತ್ವದ ತಂಡಗಳು ನೇತೃತ್ವ ವಹಿಸಲಿವೆ.
ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರು ವಿವಿಧ ಪ್ರಕರಣಗಳ ತನಿಖೆಯ ಮೇಲ್ವಿಚಾರಣೆಯನ್ನು ನಡೆಸಲಿದ್ದಾರೆ. ಅವರಿಗೆ ಅಧಿಕಾರಿಗಳು ವರದಿ ಮಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.