ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂದೇಶ್‌ಖಾಲಿ ಭೂಕಬಳಿಕೆ ಪ್ರಕರಣ: ಶಾಜಹಾನ್‌ ಸಹೋದರನಿಗೆ ಸಿಬಿಐ ಸಮನ್ಸ್

Published 1 ಮೇ 2024, 15:35 IST
Last Updated 1 ಮೇ 2024, 15:35 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದಿದೆ ಎನ್ನಲಾದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ, ಬಂಧಿತ ಶಾಜಹಾನ್‌ ಶೇಖ್‌ ಸಹೋದರ ಶೇಖ್‌ ಸಿರಾಜುದ್ದೀನ್‌ ಅವರಿಗೆ ಸಿಬಿಐ ಬುಧವಾರ ಸಮನ್ಸ್‌ ಜಾರಿ ಮಾಡಿದೆ.

ಹಗರಣದಲ್ಲಿ ಸಿರಾಜುದ್ದೀನ್‌ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. 

‘ಮೇ 6ರಂದು ಕೋಲ್ಕತ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿರಾಜುದ್ದೀನ್‌ ಅವರಿಗೆ ಸಮನ್ಸ್‌ ನೀಡಲಾಗಿದೆ. ಅವರ ಶೋಧಕ್ಕಾಗಿ ಅಧಿಕಾರಿಗಳು ಅವರ ಮನೆಗೆ ತೆರಳಿದ್ದರು. ಆದರೆ ಅವರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ನೋಟಿಸ್‌ ಅನ್ನು ಅವರ ನಿವಾಸಕ್ಕೆ ಅಂಟಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT