ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಕಳೆದ ಜನವರಿ 12 ಮತ್ತು 19 ರಂದು ಸಿಬಿಐ ಪ್ರಧಾನ ಕಚೇರಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಹೆಚ್ಚಿನ ವಿಚಾರಣೆ ಮತ್ತು ಸ್ಪಷ್ಟೀಕರಣದ ಅಗತ್ಯವಿರುವ ಕಾರಣ ಅವರಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಟ ವಿಜಯ್ ಅವರು ಭಾಗವಹಿಸಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 41 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದರು. ತಮಿಳುನಾಡು ಸರ್ಕಾರ ರಚಿಸಿದ್ದ ಎಸ್ಐಟಿ ಪ್ರಕರಣದ ತನಿಖೆ ನಡೆಸುತ್ತಿತ್ತು. ಬಳಿಕ ಸುಪ್ರೀಂ ಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.