ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ | ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ: ಸಿಬಿಐನಿಂದ ತನಿಖೆ– ಅಧಿಕಾರಿ

Published 27 ಜುಲೈ 2023, 15:42 IST
Last Updated 27 ಜುಲೈ 2023, 15:42 IST
ಅಕ್ಷರ ಗಾತ್ರ

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಜನಾಂಗೀಯ ಹಿಂಸಾಚಾರದಿಂದ ತತ್ತರಿಸುತ್ತಿರುವ ಮಣಿಪುರದಲ್ಲಿನ ಎಲ್ಲಾ ಘೋರ ಅಪರಾಧಗಳಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವ ಯಾವುದೇ ಪ್ರಯತ್ನವನ್ನು ಬಿಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೇ4ರಂದು ನಡೆದ ಘಟನೆಯ ವಿಡಿಯೊ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಗೊಳ್ಳುವ ಮೂಲಕ ಪ್ರಕರಣ ಹೊರಬಿದ್ದಿತ್ತು.

ಈ ಹೇಯ ಕೃತ್ಯದ ವಿಚಾರಣೆಯನ್ನು ನಡೆಸುವಂತೆ ಕೇಂದ್ರ ಸರ್ಕಾರ ಸಿಬಿಐ ಅನ್ನು ಕೋರಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಬಳಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಮಣಿಪುರದ ಹೊರಗೆ ವಿಚಾರಣೆ ನಡೆಸುವಂತೆ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತೆರಳುವ ಸಾಧ್ಯತೆಯಿದೆ.

ಕೇಂದ್ರ ಗೃಹ ಸಚಿವಾಲಯವು ಮೈತೇಯಿ ಮತ್ತು ಕುಕಿ ಎರಡೂ ಸಮುದಾಯಗಳ ಮುಖಂಡರೊಂದಿಗೆ ಸಂಪರ್ಕದಲ್ಲಿದೆ. ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲು ಮಾತುಕತೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಅಧಿಕೃತ ದಾಖಲೆಗಳ ಪ್ರಕಾರ, ಮಣಿಪುರದಲ್ಲಿ ಮೂರು ತಿಂಗಳಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 150 ಜನರು ಸಾವಿಗೀಡಾಗಿದ್ದಾರೆ.

ಮಣಿಪುರ ಘರ್ಷಣೆಗೆ ಸಂಬಂಧಿಸಿದ ಐದು ಗಂಭೀರ ಪ್ರಕರಣಗಳ ತನಿಖೆಯನ್ನು ಈಗಾಗಲೇ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT