ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಬಕಾರಿ ನೀತಿ ಹಗರಣ: 26ರಂದು ವಿಚಾರಣೆಗೆ ಹಾಜರಾಗಲು ಬಿಆರ್‌ಎಸ್‌ ನಾಯಕಿಗೆ ಸಮನ್ಸ್

Published 21 ಫೆಬ್ರುವರಿ 2024, 16:34 IST
Last Updated 21 ಫೆಬ್ರುವರಿ 2024, 16:34 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಫೆ.26ರಂದು ವಿಚಾರಣೆಗೆ ಹಾಜರಾಗುವಂತೆ ಬಿಆರ್‌ಎಸ್‌ ಶಾಸಕಿ ಕೆ.ಕವಿತಾ ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದೆಹಲಿಯಲ್ಲಿರುವ ಸಿಬಿಐನ ಕೇಂದ್ರ ಕಚೇರಿಯಲ್ಲಿ ತನಿಖಾ ತಂಡದ ಎದುರು ಹಾಜರಾಗುವಂತೆ ಕವಿತಾ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ, 2022ರ ಡಿಸೆಂಬರ್‌ನಲ್ಲಿ ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಕವಿತಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.

ಹಗರಣದಲ್ಲಿ ಆರೋಪಿಯಾಗಿರುವ ವಿಜಯ್‌ ನಾಯರ್‌ಗೆ ಕವಿತಾ, ಶರತ್‌ ರೆಡ್ಡಿ ಹಾಗೂ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮಾಲೀಕತ್ವದ ಸೌಥ್‌ ಗ್ರೂಪ್‌ನಿಂದ ₹100 ಕೋಟಿಯಷ್ಟು ಲಂಚ ನೀಡಲಾಗಿದೆ. ಆಮ್‌ ಆದ್ಮಿ ಪಕ್ಷದ ನಾಯಕರ ಪರವಾಗಿ ಈ ಹಣ ನೀಡಲಾಗಿದೆ ಎಂದು ಇ.ಡಿ ಆರೋಪಿಸಿದೆ. 

ಇ.ಡಿ ಆರೋಪಗಳ ಆಧಾರದ ಮೇಲೆ ತನಿಖೆ ಕೈಗೊಂಡಿರುವ ಸಿಬಿಐ, ಈ ವರೆಗೆ ಹಲವು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT