ನವದೆಹಲಿ :ಸಿಬಿಎಸ್ಇ ಪಠ್ಯಕ್ರಮದ 10 ಹಾಗೂ 12ನೇತರಗತಿ ವಿದ್ಯಾರ್ಥಿಗಳಿಗೆ ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಜುಲೈ 1ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿವೆ.

‘ಪರೀಕ್ಷಾ ಕೇಂದ್ರಕ್ಕೆ ಬರುವಾಗ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡೇ ಬರಬೇಕು ಮತ್ತು ಸ್ಯಾನಿಟೈಸರ್ಗಳನ್ನು ತರಬೇಕು. ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗಿಲ್ಲ ಎಂಬುದನ್ನು ಪಾಲಕರು ದೃಢಪಡಿಸಬೇಕು’ ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕ ಸನ್ಯಮ್ ಭಾರದ್ವಾಜ್ ಹೇಳಿದ್ದಾರೆ.

ದೇಶದಾದ್ಯಂತ 12ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಆದರೆ, 10ನೇ ತರಗತಿ ಪರೀಕ್ಷೆಗಳು ಈಶಾನ್ಯ ದೆಹಲಿಯಲ್ಲಿ ಮಾತ್ರ ನಡೆಯಲಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಈ ಪ್ರದೇಶದಲ್ಲಿ ಪರೀಕ್ಷೆಗಳು ನಡೆದಿರಲಿಲ್ಲ.

12ನೇ ತರಗತಿಯವರಿಗೆ ಜುಲೈ 1ರಂದು ಹೋಮ್ ಸೈನ್ಸ್ ಹಾಗೂ ಜುಲೈ 2ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಜುಲೈ 9ರಂದು ವ್ಯವಹಾರ ಅಧ್ಯಯನ, ಜುಲೈ 10ರಂದು ಜೈವಿಕ ತಂತ್ರಜ್ಞಾನ ಮತ್ತು ಜುಲೈ 11ರಂದು ಭೂಗೋಳ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿವೆ. ಈಶಾನ್ಯ ದೆಹಲಿಗೆ 12ನೇ ತರಗತಿಗೂ ಪ್ರತ್ಯೇಕ ಪರೀಕ್ಷಾ ವೇಳಾಪಟ್ಟಿ ಸಿದ್ದಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.