ನವದೆಹಲಿ: ದೇಶದ ಸಶಸ್ತ್ರ ಪಡೆಗಳು ಯಾವುದೇ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸಿದ್ಧವಾಗಿವೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು , ಸೇನೆಯ ಮೂರೂ ಪಡೆಗಳ ನಡುವೆ ಸಹಕಾರ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.

ಓದಿ:ತಾಲಿಬಾನ್ ಗೆದ್ದರೆ ಅಫ್ಗಾನಿಸ್ತಾನದಲ್ಲಿ ಅಂತರ್ಯುದ್ಧ ಸೃಷ್ಟಿ ಭೀತಿ: ಹರ್ಲನ್

ಸಶಸ್ತ್ರ ಪಡೆಗಳನ್ನು ಆಧುನೀಕರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಗಳನ್ನೂ ಉಲ್ಲೇಖಿಸಿದ ಅವರು, ಪಡೆಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಬೇಕಾದ ಅಗತ್ಯವಿದೆ ಎಂದಿದ್ದಾರೆ.

ಭಾರತವು ಶಾಂತಿಪ್ರಿಯ ದೇಶ. ಆದರೆ ಮುಂದಿರುವ ಸವಾಲುಗಳನ್ನು ಪರಿಗಣಿಸಿ ಸೇನೆಯನ್ನು ಯುದ್ಧ ಸನ್ನದ್ಧವಾಗಿರುವಂತೆ ತರಬೇತಿ ನೀಡುವ ಅಗತ್ಯ ದೇಶಕ್ಕಿತ್ತು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.