ನವದೆಹಲಿ: ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಕುರಿತು ವಿರೋಧ ಪಕ್ಷಗಳು ಎರಡೂ ಸದನಗಳಲ್ಲಿ ನೀಡಿದ್ದ ನೋಟಿಸ್ ಅನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಸಿ.ಪಿ.ರಾಧಾ ಕೃಷ್ಣನ್ ಸೋಮವಾರ ತಿರಸ್ಕರಿಸಿದ್ದಾರೆ.

ವಿರೋಧ ಪಕ್ಷಗಳು ನೋಟಿಸ್ ನೀಡಿದ 25 ದಿನಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೋಟಿಸ್ ತಿರಸ್ಕರಿಸಿದ ಬಗ್ಗೆ ಸ್ಪೀಕರ್, ಸಭಾಪತಿ ಅವರು ಪ್ರತ್ಯೇಕ ಆದೇಶ ನೀಡಿದ್ದಾರೆ. ‘1968ರ ನ್ಯಾಯಾಧೀಶರು (ವಿಚಾರಣೆ) ಕಾಯ್ದೆಯ ಸೆಕ್ಷನ್ 3 ನೀಡಿದ ಅಧಿಕಾರವನ್ನು ಬಳಸಿ, ನೋಟಿಸ್ ಅನ್ನು ತಿರಸ್ಕರಿಸಲಾಗಿದೆ’ ಎಂದು ಸ್ಪೀಕರ್, ಸಭಾಪತಿ ನೀಡಿದ ಆದೇಶದಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-751217149

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.