ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ: ಮಳೆ, ಬಿರುಗಾಳಿಗೆ ಕುಸಿದ ಗುವಾಹಟಿ ವಿಮಾನ ನಿಲ್ದಾಣದ ಸೀಲಿಂಗ್‌

Published 1 ಏಪ್ರಿಲ್ 2024, 2:59 IST
Last Updated 1 ಏಪ್ರಿಲ್ 2024, 2:59 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಲೋಕಪ್ರಿಯ ಗೋಪಿನಾಥ ಬೋರ್ದಲೋಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕೆಲ ಭಾಗದ ಸೀಲಿಂಗ್‌ ಕುಸಿದಿದೆ. 

ಪೈಪ್‌ಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾದ ಪರಿಣಾಮ ಸೀಲಿಂಗ್‌ ಕುಸಿದಿದೆ, ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ. 

ವಿಮಾನ ನಿಲ್ದಾಣದೊಳಗೆ ಸೀಲಿಂಗ್‌ ಕುಸಿದಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಹಲವು ಪ್ರಯಾಣಿಕರು ನಿಲ್ದಾಣದ ಹೊರಭಾಗದಲ್ಲಿ ಕಾಯುತ್ತಿರುವುದನ್ನು ಕಾಣಬಹುದು. ಏಕಾಏಕಿ ಒಂದು ಭಾಗದ ಸೀಲಿಂಗ್‌ ಕುಸಿದಿದ್ದು, ಅಲ್ಲಿದ್ದ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಇನ್ನೊಂದೆಡೆ ವಿಮಾನ ನಿಲ್ದಾಣದೊಳಗೆ ಮಳೆ ನೀರು ಸುರಿಯುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

ಪ್ರತಿಕೂಲ ವಾತಾವರಣದ ಹಿನ್ನೆಲೆ ಇಂಡಿಗೊ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸೇರಿದಂತೆ ಒಟ್ಟು ಆರು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಈವರೆಗೆ ಐವರು ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT