ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಶ್ಮಿಕಾ ಡೀಪ್‌ಫೇಕ್‌ ವಿಡಿಯೊ: ಸಾಮಾಜಿಕ ಜಾಲತಾಣಗಳಿಗೆ ಮಾರ್ಗಸೂಚಿ ನೀಡಿದ ಕೇಂದ್ರ 

Published 7 ನವೆಂಬರ್ 2023, 13:09 IST
Last Updated 7 ನವೆಂಬರ್ 2023, 13:09 IST
ಅಕ್ಷರ ಗಾತ್ರ

ನವದೆಹಲಿ: ಸಾಮಾಜಿಕ ಜಾಲತಾಣಗಳಾದ ‘ಎಕ್ಸ್‌’, ಇನ್‌ ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ಯಾವುದೇ ವ್ಯಕ್ತಿಯ ಬಗ್ಗೆ ತಿರುಚಿದ ಛಾಯಾಚಿತ್ರಗಳು ಹಾಗೂ ವಿಡಿಯೊ ಗಳು ಹರಿದಾಡುತ್ತಿರುವ ಕುರಿತು ದೂರು ದಾಖಲಾದ 24 ಗಂಟೆಯೊಳಗೆ ಅದನ್ನು ತೆಗೆದುಹಾಕಬೇಕು ಎಂದು ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಸೂಚಿಸಿದೆ.

ನಟಿ ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೊದಲ್ಲಿ ಬ್ರಿಟನ್‌ನಲ್ಲಿ ನೆಲೆಸಿರುವ ಭಾರತ ಮೂಲದ ಯುವತಿಯೊಬ್ಬರ ಮುಖವನ್ನು ಕೃತಕ ಬುದ್ಧಿಮತ್ತೆ ಬಳಸಿ, ರಶ್ಮಿಕಾ ಅವರ ಮುಖವನ್ನು ಹೋಲುವಂತೆಯೇ ಎಡಿಟ್‌ ಮಾಡ ಲಾಗಿತ್ತು. ಈ ಬಗ್ಗೆ ಬಾಲಿವುಡ್‌ ನಟ ಅಮಿತಾಬ್‌ ಬಚ್ಚನ್‌ ಸೇರಿದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರವು ಈ ಆದೇಶ ಹೊರಡಿಸಿದೆ. 

‘ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೇಂದ್ರವು ಸೂಚಿಸಿದೆ’ ಎಂದು ಮೂಲಗಳು ತಿಳಿಸಿವೆ.

ಯಾವುದೇ ವ್ಯಕ್ತಿಯನ್ನು ಹೋಲು ವಂತಹ ತಿರುಚಿದ ವಿಡಿಯೊಗಳು ಹರಿದಾಡದಂತೆ ಎಚ್ಚರವಹಿಸುವುದು ಜಾಲತಾಣಗಳ ಹೊಣೆಗಾರಿಕೆಯಾಗಿದೆ. ದೂರು ನೀಡಿದ ತಕ್ಷಣವೇ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದೆ.

ನಿಯಮ ಉಲ್ಲಂಘನೆ ಮಾಡಿದರೆ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಐ.ಟಿ ಕಾಯ್ದೆಯಡಿ ಕ್ರಮ ಜರುಗಿಸಲಾಗುತ್ತದೆಂದು ಕೇಂದ್ರವು ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಆಕ್ಷೇಪ: ರಶ್ಮಿಕಾ ಅವರ ತಿರುಚಿದ ವಿಡಿಯೊ ಬಗ್ಗೆ ‘ಎಕ್ಸ್‌’ನಲ್ಲಿ ಸೋಮವಾರ ಪ್ರತಿಕ್ರಿಯಿಸಿದ್ದ
ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್‌  ಚಂದ್ರ ಶೇಖರ್‌, ‘ಸಮಾಜಕ್ಕೆ ತಪ್ಪು ಮಾಹಿತಿ ನೀಡುವ ಇಂತಹ ವಿಡಿಯೊಗಳನ್ನು ತೆಗೆದುಹಾಕುವುದು ಸಾಮಾಜಿಕ ಜಾಲತಾಣ ನಿರ್ವಹಿಸುವ ಕಂಪನಿಗಳ ಹೊಣೆಯಾಗಿದೆ’ ಎಂದಿದ್ದರು.

‘ಮಾಹಿತಿ ತಂತ್ರಜ್ಞಾನ (ಐ.ಟಿ) ನಿಯಮ 7 ಅನ್ನು ಪಾಲಿ ಸುವುದು ಕಡ್ಡಾಯ’ ಎಂದು ಹೇಳಿದ್ದಾರೆ.

ಐಟಿ ನಿಯಮದ ಪ್ರಕಾರ ನಡೆದುಕೊಳ್ಳದಿದ್ದರೆ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬಹುದು ಅಥವಾ 3 ವರ್ಷ ಜೈಲು ಶಿಕ್ಷೆ ಮತ್ತು  ₹1 ಲಕ್ಷ ದಂಡವನ್ನೂ ವಿಧಿಸಬಹುದಾಗಿದೆ.

ರಶ್ಮಿಕಾ ಡೀಪ್‌ಫೇಕ್‌ ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ರಾಜ್ಯ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌, ತಪ್ಪಾದ ಮಾಹಿತಿಗಳನ್ನು ತೆಗೆದುಹಾಕಲು ಸಾಮಾಜಿಕ ಜಾಲತಾಣಗಳು ಬದ್ಧವಾಗಿದೆ ಎಂದು ತಿಳಿಸಿದ್ದರು.

ಸಚಿವರ ಆಕ್ಷೇಪ:

ರಶ್ಮಿಕಾ ಅವರ ತಿರುಚಿದ ವಿಡಿಯೊ ಬಗ್ಗೆ ‘ಎಕ್ಸ್‌’ನಲ್ಲಿ ಸೋಮವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್‌  ಚಂದ್ರಶೇಖರ್‌, ‘ಸಮಾಜಕ್ಕೆ ತಪ್ಪು ಮಾಹಿತಿ ನೀಡುವ ಇಂತಹ ವಿಡಿಯೊಗಳನ್ನು ತೆಗೆದುಹಾಕುವುದು ಸಾಮಾಜಿಕ ಜಾಲತಾಣ ನಿರ್ವಹಿಸುವ ಕಂಪನಿಗಳ ಹೊಣೆಯಾಗಿದೆ’ ಎಂದಿದ್ದರು.

‘ಈ ವರ್ಷದ ಏಪ್ರಿಲ್‌ನಲ್ಲಿ ಪ್ರಕಟಿಸಿರುವ ಮಾಹಿತಿ ತಂತ್ರಜ್ಞಾನ (ಐ.ಟಿ) ನಿಯಮ 7 ಅನ್ನು ಪಾಲಿಸುವುದು ಕಡ್ಡಾಯ. ಇದನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಕಂಪನಿ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಸಂತ್ರಸ್ತರು ದೂರು ದಾಖಲಿಸಲು ಅವಕಾಶವಿದೆ’ ಎಂದು ಹೇಳಿದ್ದಾರೆ.

‘ಇತ್ತೀಚೆಗೆ ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಇದು ತಪ್ಪು ಮಾಹಿತಿಗೆ ಸಂಬಂಧಿಸಿದ ಅಪಾಯಕಾರಿ ಹಾಗೂ ಮಾನಹಾನಿಯ ಅತಿದೊಡ್ಡ ರೂಪವಾಗಿದೆ. ಇದನ್ನು ಸರಿಯಾಗಿ ನಿಭಾಯಿಸುವುದು ಸಾಮಾಜಿಕ ತಾಣಗಳ ಹೊಣೆಯಾಗಿದೆ’ ಎಂದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT