ನವದೆಹಲಿ: ಶಾಲಾ ಆವರಣದಲ್ಲಿ ಟ್ಯೂಷನ್ ಅಥವಾ ಕೋಚಿಂಗ್ ತರಗತಿಗಳನ್ನು ನಡೆಸುವುದಕ್ಕೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ನಿರ್ಬಂಧ ವಿಧಿಸಿದೆ.

ಶಾಲಾ ಕಟ್ಟಡ ಮತ್ತು ಮೂಲಸೌಕರ್ಯಗಳನ್ನು ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿಗೆ ಮಾತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳಿಗೆ ಅಲ್ಲ. ಶಾಲೆಗಳಿಗೆ ಮಾನ್ಯತೆ ನೀಡುವುದಕ್ಕೆ ಸಂಬಂಧಿಸಿದ ಬೈಲಾಗಳಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಸಿಬಿಎಸ್ಇ ತಿಳಿಸಿದೆ.

ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಬೈಲಾದಂತೆ ಷರತ್ತುಗಳನ್ನು ಪಾಲಿಸದಿದ್ದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.