ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಗ್ರಾಮಗಳಲ್ಲೂ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ

ಕೇಂದ್ರ ಬಜೆಟ್
Last Updated 5 ಜುಲೈ 2019, 18:30 IST
ಅಕ್ಷರ ಗಾತ್ರ

2014ರಲ್ಲಿ ಆರಂಭಿಸಿರುವ ಮಹತ್ವಾಕಾಂಕ್ಷೆಯ ಸ್ವಚ್ಛಭಾರತ ಅಭಿಯಾನವು ಯಶಸ್ಸು ಸಾಧಿಸಿದ್ದು, ಈ ಯೋಜನೆಯ ಅಡಿಯಲ್ಲಿ ದೇಶದ ಪ್ರತಿ ಗ್ರಾಮಗಳಲ್ಲೂ ಸುಸ್ಥಿರ ಘನತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಮಲಿನ ನೀರನ್ನು ಶುದ್ಧೀಕರಿಸಿ ಮರುಬಳಕೆ ಮಾಡುವುದಕ್ಕೂ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಮಹಾತ್ಮ ಗಾಂಧಿ ಅವರ 150ನೇ ಜಯಂತಿ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಲು ಸ್ವಚ್ಛ ಭಾರತ ಅಭಿಯಾನ (ಗ್ರಾಮೀಣ) ಮತ್ತು ಸ್ವಚ್ಛ ಭಾರತ ಅಭಿಯಾನ (ನಗರ) ಎಂಬ ಎರಡು ಉಪಯೋಜನೆಗಳ ಮೂಲಕ ಈ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದಿದ್ದಾರೆ.

* 2014 ಅಕ್ಟೋಬರ್‌ 2ರಿಂದ ಇದುವರೆಗೆ 9.6ಕೋಟಿ ಶೌಚಾಲಯಗಳ ನಿರ್ಮಾಣ.

* 5.6 ಲಕ್ಷಕ್ಕಿಂತಲೂ ಹೆಚ್ಚು ಗ್ರಾಮಗಳು ‘ಬಯಲು ಬಹಿರ್ದೆಸೆಮುಕ್ತ’ (ಒಡಿಎಫ್‌).

* ತ್ಯಾಜ್ಯದಿಂದ ಇಂಧನ ಉತ್ಪಾದಿಸಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆಗೆ ಚಿಂತನೆ.

* ಅಕ್ಟೋಬರ್‌ 2 ರಂದು ರಾಜ್‌ಘಾಟ್‌ನಲ್ಲಿ ರಾಷ್ಟ್ರೀಯ ಸ್ವಚ್ಛತಾ ಕೇಂದ್ರ ಉದ್ಘಾಟನೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT