ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಹ್ಯಾಕಾಶ ಇಲಾಖೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತ!

ಕೇಂದ್ರ ಸರ್ಕಾರವು ಪ್ರತಿವರ್ಷ ನೀಡುತ್ತಿರುವ ಅನುದಾನವನ್ನು ಕಡಿತ ಮಾಡುತ್ತಲೇ ಇದೆ.
Published 26 ಆಗಸ್ಟ್ 2023, 0:02 IST
Last Updated 26 ಆಗಸ್ಟ್ 2023, 0:02 IST
ಅಕ್ಷರ ಗಾತ್ರ

ಬೆಂಗಳೂರು: ಈಚೆಗಷ್ಟೇ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್‌ ಲ್ಯಾಂಡರ್‌ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ಕೇಂದ್ರ ಸರ್ಕಾರದ ‘ಬಾಹ್ಯಾಕಾಶ ಇಲಾಖೆ’ಯ ಅಧೀನ ಸಂಸ್ಥೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಮಹತ್ವದ ಪಾತ್ರವಹಿಸುವ ಈ ಇಲಾಖೆಗೆ ಕೇಂದ್ರ ಸರ್ಕಾರವು ಪ್ರತಿವರ್ಷ ನೀಡುತ್ತಿರುವ ಅನುದಾನವನ್ನು ಕಡಿತ ಮಾಡುತ್ತಲೇ ಇದೆ. 

2022–23ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಈ ಇಲಾಖೆಗೆ ₹13,700 ಕೋಟಿ ಅನುದಾನವನ್ನು ಘೋಷಿಸಿತ್ತು. 2023–24ನೇ ಸಾಲಿನ ಬಜೆಟ್‌ನಲ್ಲೇ ಅನುದಾನವನ್ನು ₹12,543 ಕೋಟಿಗೆ ಕಡಿತ ಮಾಡಲಾಗಿದೆ. ಇದರಿಂದ ಇಲಾಖೆಗೆ ಘೋಷಣೆಯಾದ ಅನುದಾನದಲ್ಲಿ ಶೇ 8.5ರಷ್ಟು ಕಡಿಮೆಯಾದಂತಾಗಿದೆ. 

ಇನ್ನೊಂದೆಡೆ ಬಜೆಟ್‌ನಲ್ಲಿ ಘೋಷಿಸಿದಷ್ಟೂ ಅನುದಾನವನ್ನು ಕೇಂದ್ರ ಸರ್ಕಾರ ಇಲಾಖೆಗೆ ನೀಡುತ್ತಿಲ್ಲ. ಬದಲಿಗೆ ಅಂತಿಮವಾಗಿ ನೀಡುತ್ತಿರುವ ಅನುದಾನದಲ್ಲಿ ಮತ್ತಷ್ಟು ಕಡಿತ ಮಾಡುತ್ತಿದೆ.

ಆಧಾರ: ಕೇಂದ್ರ ಹಣಕಾಸು ಸಚಿವರು ಸಂಸತ್ತಿನಲ್ಲಿ ಮಂಡಿಸಿದ ಆಯಾ ವರ್ಷದ ಬಜೆಟ್‌ ದಾಖಲೆಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT