ನವದೆಹಲಿ: ಸಂಸತ್ ಭವನದ ನೂತನ ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಇಲ್ಲಿನ ಪ್ರತಿಷ್ಠಿತ ಲುಟೆನ್ಸ್ ಪ್ರದೇಶದಲ್ಲಿರುವ ಶ್ರಮಶಕ್ತಿ ಭವನ ಮತ್ತು ಸಾರಿಗೆ ಭವನಗಳನ್ನು ಮೊದಲು ನೆಲಸಮ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಶ್ರಮಶಕ್ತಿ ಭವನ ರಫಿ ಮಾರ್ಗದಲ್ಲಿದ್ದರೆ, ಸಾರಿಗೆ ಭವನವು ಸಂಸದ್ ಮಾರ್ಗದಲ್ಲಿದೆ. ಇದೇ ಸ್ಥಳದಲ್ಲಿ ಸಂಸದರ ಕಚೇರಿಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿರುವ ಎಚ್‌ಸಿಪಿ ಡಿಸೈನ್, ಪ್ಲಾನಿಂಗ್ ಮತ್ತು ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಈ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ವಿವಿಧ ಸಚಿವಾಲಯಗಳ ಕಚೇರಿಗಳನ್ನು ತಾತ್ಕಾಲಿಕವಾಗಿ ಮಧ್ಯ ದೆಹಲಿಯ ಗೋಲ್ ಮಾರ್ಕೆಟ್, ಕೆ ಜಿ ಮಾರ್ಗ್, ಆಫ್ರಿಕಾ ಅವೆನ್ಯೂ ಮತ್ತು ತಾಲ್‌ಕಟೋರಾ ಸ್ಟೇಡಿಯಂಗೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದೆ. ಸಚಿವಾಲಯಗಳ ಕಾರ್ಯದಲ್ಲಿ ಅಡಚಣೆ ಉಂಟಾಗಬಾರದು ಎಂಬ ಕಾರಣಕ್ಕಾಗಿ ಹಂತ ಹಂತವಾಗಿ ಕಟ್ಟಡವನ್ನು ನೆಲಸಮ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.