ನವದೆಹಲಿ: ಮಂಕಿಪಾಕ್ಸ್ ಪ್ರಕರಣಗಳು ಕಂಡುಬಂದಿರುವ ದೇಶಗಳಿಂದ ವಾಪಸ್ಸಾಗಿರುವ ಶಂಕಿತ ಸೋಕಿತರ ಮೇಲೆ ನಿಗಾ ವಹಿಸಲು ಆಸ್ಪತ್ರೆಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಬುಧವಾರ ಸಲಹೆ ನೀಡಿದೆ. ಅಲ್ಲದೆ, ಈಗಾಗಲೇ ಗುರುತಿಸಲಾಗಿರುವ ಆರೋಗ್ಯ ಕೇಂದ್ರಗಳಲ್ಲಿ ಶಂಕಿತ ಸೋಂಕಿತರನ್ನು ಪ್ರತ್ಯೇಕವಾಗಿರಿಸಲು ಸೂಚಿಸಲಾಗಿದೆ. ವಿಶ್ವದ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ಸಲಹೆ ನೀಡಿದೆ.

ಕೆನಡಾದಿಂದ ವಾಪಸ್ಸಾಗಿರುವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದ್ದು, ಅವರನ್ನು ಪ್ರತ್ಯೇಕವಾಗಿರಿಸಲಾಗಿದೆ. ಆದರೆ, ಪ್ರಯಾಣಿಕನಿಂದ ಸಂಗ್ರಹಿಸಲಾದ ಮಾದರಿಯನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಯಲ್ಲಿ ಪರೀಕ್ಷೆಗೊಳಪಡಿಸಲಾಗಿದ್ದು, ಅವರಿಗೆ ಮಂಕಿಪಾಕ್ಸ್ ಇಲ್ಲ ಎಂಬುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಪ್ರಯಾಣಿಕ ಯಾವ ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದ್ದಾರೆ ಎಂಬ ಮಾಹಿತಿ ಬಹಿರಂಗಪಡಿಸಿಲ್ಲ.

ಮಂಕಿಪಾಕ್ಸ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸುವಂತೆವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ನಿಗಾ ವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಸಚಿವಾಲಯ ಸೂಚಿಸಿತ್ತು.

ಮಂಕಿಪಾಕ್ಸ್ ಚಿಕಿತ್ಸೆ ಮತ್ತು ಸೋಂಕು ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಮತ್ತು ರಾಷ್ಟ್ರೀಯ ಸೋಂಕು ನಿಯಂತ್ರಣ ಕೇಂದ್ರ(ಎನ್ಸಿಡಿಸಿ) ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದೆ.

ಬ್ರಿಟನ್, ಇಟಲಿ, ಪೋರ್ಚುಗಲ್, ಸ್ಪೇನ್, ಕೆನಡಾ ಮತ್ತು ಅಮೆರಿಕ ಸೇರಿದಂತೆ ಇನ್ನಿತರ ದೇಶಗಳಲ್ಲಿ ಮಂಕಿಪಾಕ್ಸ್ ಸೋಂಕು ಕಂಡುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.