ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂಎವೈಜಿ: ಆಗಸ್ಟ್‌ 15ರೊಳಗೆ 2 ಕೋಟಿ ಮನೆ ನಿರ್ಮಾಣ

ಕರ್ನಾಟಕಕ್ಕೆ ಸೂಚನೆ ನೀಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ
Last Updated 23 ಡಿಸೆಂಬರ್ 2021, 13:27 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಮಂತ್ರಿ ಆವಾಸ್‌ ಯೋಜನಾ– ಗ್ರಾಮೀಣ (ಪಿಎಂಎವೈ–ಜಿ) ಅಡಿ ಮುಂದಿನ ವರ್ಷ ಆಗಸ್ಟ್ 15ರೊಳಗೆ 2.02 ಕೋಟಿ ಮನೆಗಳನ್ನು ನಿರ್ಮಿಸುವಂತೆ ಕೇಂದ್ರವು ಕರ್ನಾಟಕ ಸರ್ಕಾರಕ್ಕೆ ಗುರಿ ನಿಗದಿ ಮಾಡಿದೆ.

‘ಈ ಯೋಜನೆಯಡಿ ಕರ್ನಾಟಕಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು 2.95 ಕೋಟಿ ಮನೆಗಳ ನಿರ್ಮಾಣ ಕಾರ್ಯವನ್ನು 2024ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಲು ರಾಜ್ಯಕ್ಕೆ ಸೂಚಿಸಲಾಗಿದೆ’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವೆ ಸಾಧ್ವಿ ನಿರಂಜನಜ್ಯೋತಿ ಹೇಳಿದ್ದಾರೆ.

‘ಯೋಜನೆಯಡಿ ಕರ್ನಾಟಕಕ್ಕೆ 2019–20ನೇ ಸಾಲಿಗೆ 86,000, 2020–21ನೇ ಸಾಲಿಗೆ 1,51,715 ಮನೆಗಳನ್ನು ಹಂಚಿಕೆ ಮಾಡಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

2016–17 ರಿಂದ 2018–19ರ ವರೆಗೆ ಅವಧಿಯಲ್ಲಿ ಮೊದಲ ಹಂತದಲ್ಲಿ ರಾಜ್ಯಕ್ಕೆ 1,24,088 ಮನೆಗಳನ್ನು ನಿರ್ಮಿಸುವ ಗುರಿ ನಿಗದಿ ಮಾಡಲಾಗಿತ್ತು. ಈ ಅವಧಿಗೆ ಸಂಬಂಧಿಸಿದಂತೆ, 1,11,108 ಫಲಾನುಭವಿಗಳಿಗೆ ಸಹಾಯಧನದ ಮೊದಲ ಕಂತು ಹಾಗೂ 1,01,218 ಫಲಾನುಭವಿಗಳಿಗೆ ಎರಡನೇ ಕಂತನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT