ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾಗಿದ್ದಾರೆ. ಅವರ ಗೌರವಾರ್ಥ ಕೇಂದ್ರ ಸರ್ಕಾರ ದೇಶಾದ್ಯಂತ ಏಳು ದಿನಗಳ (ಡಿಸೆಂಬರ್ 26 ರಿಂದ 2025ರ ಜನವರಿ 1ರವರೆಗೆ) ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
.ಮನಮೋಹನ್ ಸಿಂಗ್ ನಿಧನ: ರಾಜ್ಯದಲ್ಲಿ ಇಂದು ಸರ್ಕಾರಿ ರಜೆ, 7 ದಿನ ಶೋಕಾಚರಣೆ.
ಈ ಸಮಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
.ಉದಾರೀಕರಣದ ಹರಿಕಾರ ಮನಮೋಹನ್ ಸಿಂಗ್ ಹೆಜ್ಜೆಗುರುತು!.
ಶೋಕಾಚರಣೆಯ ಸಮಯದಲ್ಲಿ ದೇಶದಾದ್ಯಂತ ಪ್ರಮುಖ ರಾಷ್ಟ್ರೀಯ ಕಟ್ಟಡಗಳು ಅಥವಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಅಲ್ಲದೇ ದೇಶದ ಹೊರಗೆ ಇರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ. ಅಲ್ಲದೇ ಈ ವೇಳೆ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುತ್ತದೆ.
.Manmohan Singh | ನಾಳೆ ಮನಮೋಹನ ಸಿಂಗ್ ಅಂತ್ಯಕ್ರಿಯೆ: ಕಾಂಗ್ರೆಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.