ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ರೈತರಿಗೆ ವಿಶ್ವಾಸದ್ರೋಹ: ಬೃಂದಾ ಕಾರಟ್

Published 13 ಫೆಬ್ರುವರಿ 2024, 11:38 IST
Last Updated 13 ಫೆಬ್ರುವರಿ 2024, 11:38 IST
ಅಕ್ಷರ ಗಾತ್ರ

ರಾಂಚಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರಿಗೆ ವಿಶ್ವಾಸದ್ರೋಹ ಬಗೆಯುತ್ತಿದೆ ಮತ್ತು ಅವರ ಹಕ್ಕುಗಳನ್ನು ನಿರಾಕರಿಸುತ್ತಿದೆ ಎಂದು ಸಿಪಿಎಂ ಹಿರಿಯ ನಾಯಕಿ ಬೃಂದಾ ಕಾರಟ್‌ ಮಂಗಳವಾರ ಕಿಡಿಕಾರಿದರು.

ರಾಷ್ಟ್ರ ರಾಜಧಾನಿಯತ್ತ ಹೊರಟಿದ್ದ ಸಾವಿರಾರು  ರೈತರನ್ನು ಅಧಿಕಾರಿಗಳು ಗಡಿಗಳಲ್ಲಿ ತಡೆದ ಬೆನ್ನಲ್ಲೇ ಈ ಹೇಳಿಕೆ ನೀಡಿದರು.

‘ಅವರು (ಕೇಂದ್ರ ಸರ್ಕಾರ) ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಏಕೆ ಹೇಳುತ್ತಿದ್ದಾರೆ?’ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ, ‘ಕೇಂದ್ರ ಸರ್ಕಾರವು  ಕೃಷಿ ವಿಜ್ಞಾನಿ ಎಂ.ಎಸ್‌.ಸ್ವಾಮಿನಾಥನ್‌ ಅವರಿಗೆ ಬಹಳ ತಡವಾಗಿ ಭಾರತ ರತ್ನ ಘೋಷಿಸಿತು. ಅವರು ರೈತರ ಹಕ್ಕುಗಳ ಪರವಾಗಿದ್ದರು. ಅನ್ನದಾತರ ಅನುಕೂಲಕ್ಕಾಗಿ ಅವರ ನೇತೃತ್ವದ ಆಯೋಗವು ನೀಡಿದ್ದ ಶಿಫಾರಸುಗಳನ್ನು ಇನ್ನೂ ಜಾರಿ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT