ನವದೆಹಲಿ: ಮುಂದಿನ ಒಂದೂವರೆ ವರ್ಷಗಳ ಕಾಲ ಕೃಷಿ ಕಾನೂನುಗಳನ್ನು ಅಮಾನತಿನಲ್ಲಿಡುವ ಬಗ್ಗೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ.

ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ ಹತ್ತನೇ ಸುತ್ತಿನ ಮಾತುಕತೆ ಬುಧವಾರ ನಡೆದಿತ್ತು. 11ನೇ ಸುತ್ತಿನ ಮಾತುಕತೆಯನ್ನು ಜನವರಿ 22ರಂದು ಆಯೋಜಿಸಲಾಗಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪೀಯೂಷ್ ಗೋಯಲ್ ಮತ್ತು ಪಂಜಾಬ್ ಸಂಸದ ಹಾಗೂ ಕೇಂದ್ರ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು ರೈತ ನಾಯಕರ ಜೊತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು.

ಕೇಂದ್ರದೊಂದಿಗೆ ನಡೆದ ಮಾತುಕತೆಯ ಬಳಿಕ ಹೇಳಿಕೆ ನೀಡಿರುವ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹನ್, 'ಮುಂದಿನ ಒಂದೂವರೆ ವರ್ಷಗಳ ಕಾಲ ಕೃಷಿ ಕಾನೂನುಗಳನ್ನು ಅಮಾನತಿನಲ್ಲಿಡುವ ಬಗ್ಗೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ನಾವು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇವೆ. ಆದರೆ, ಇದು ಸರ್ಕಾರದ ಕಡೆಯಿಂದ ಪ್ರಸ್ತಾಪ ಆಗಿರುವ ಕಾರಣ ಅದರ ಬಗ್ಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ' ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳ ರದ್ದತಿಗೆ ಆಗ್ರಹಿಸಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರು ಮತ್ತು ಕೇಂದ್ರ ಕೃಷಿ ಸಚಿವಾಲಯದ ನಡುವೆ ಶುಕ್ರವಾರ ನಡೆದ 9ನೇ ಸುತ್ತಿನ ಮಾತುಕತೆ ವಿಫಲವಾಗಿದ್ದ ಹಿನ್ನೆಲೆಯಲ್ಲಿ 10ನೇ ಸುತ್ತಿನ ಮಾತುಕತೆ ನಿಗದಿಯಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.