ನವದೆಹಲಿ: ಸರ್ಕಾರಿ ನೌಕರರು ಖಾಸಗಿ ಸಂಘ–ಸಂಸ್ಥೆಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದಕ್ಕೂ ಮುನ್ನ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಸಂಬಂಧ ಸಿಬ್ಬಂದಿ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈಗಾಗಲೇ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿಲ್ಲ ಎಂಬುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ಹೇಳಿವೆ.

ನೌಕರರು ಸ್ವೀಕರಿಸುವ ಪ್ರಶಸ್ತಿಯು ಹಣವನ್ನು ಒಳಗೊಂಡಿರಬಾರದು. ಪ್ರಶಸ್ತಿಗಳನ್ನು ನೀಡುವ ಖಾಸಗಿ ಸಂಸ್ಥೆಗಳು/ಸಂಘಟನೆಗಳು ಸಂದೇಹಾಸ್ಪದವಾಗಿರಬಾರದು ಎಂಬುದು ಸೇರಿದಂತೆ ಹಲವಾರು ಅಂಶಗಳನ್ನು ಮಾರ್ಗಸೂಚಿಗಳು ಒಳಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.