ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆನ್‌ಲೈನ್‌ ಮೂಲಕವೇ ಅಂಗವಿಕಲರ ಪ್ರಮಾಣಪತ್ರ

Last Updated 6 ಮೇ 2021, 11:16 IST
ಅಕ್ಷರ ಗಾತ್ರ

ನವದೆಹಲಿ: ಅಂಗವಿಕಲರಿಗೆ ಆನ್‌ಲೈನ್‌ ಮೂಲಕವೇ ಪ್ರಮಾಣಪತ್ರ ವಿತರಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸೋಮವಾರ ಆದೇಶ ಹೊರಡಿಸಿದೆ.

ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಆನ್‌ಲೈನ್‌ ಮೂಲಕವೇ ಜೂನ್‌ 1ರಿಂದ ಜಾರಿಗೆ ಬರುವಂತೆ ಆನ್‌ಲೈನ್ ಮೂಲಕವೇ ಅಂಗವಿಕಲರಿಗೆ ಪ್ರಮಾಣಪತ್ರ ನೀಡಬೇಕು ಎಂದು ಸಚಿವಾಲಯ ಟ್ವೀಟ್ ಮಾಡಿದೆ.

ಕೋವಿಡ್‌ ಪರಿಸ್ಥಿತಿಯಿಂದಾಗಿ ವಿಧಿಸಲಾಗಿದ್ದ ನಿರ್ಬಂಧಗಳ ಹಿನ್ನೆಲೆಯಲ್ಲಿ ಪ್ರಮಾಣಪತ್ರ ಪಡೆಯುವುದು ಅಂಗವಿಕಲರಿಗೆ ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕುರಿತ ಬೇಡಿಕೆಗಳು ಕೇಳಿಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT