ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡುವ ಮಹತ್ವದ ನಿರ್ಧಾರವೊಂದನ್ನು ಕೇಂದ್ರ ಸರ್ಕಾರವು ಶುಕ್ರವಾರ ಪ್ರಕಟಿಸಿದೆ.

ಕೇಂದ್ರ ಸಂಪುಟದ ಈ ನಿರ್ಧಾರದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಅವರು ‘ಎನ್‌ಎಫ್‌ಎಸ್‌ಎ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಸಂಪೂರ್ಣ ಹೊರೆಯನ್ನು ಕೇಂದ್ರವು ಭರಿಸಲಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕವಾಗಿ ₹ 2 ಲಕ್ಷ ಕೋಟಿ ವೆಚ್ಚವಾಗಲಿದೆ’ ಎಂದು ಹೇಳಿದ್ದಾರೆ.

ಎನ್‌ಎಫ್‌ಎಸ್‌ಎ ಅಡಿಯಲ್ಲಿ ಸರ್ಕಾರವು ಪ್ರಸ್ತುತ ಪ್ರತಿ ವ್ಯಕ್ತಿಗೆ ಕೆ.ಜಿ.ಗೆ ₹ 2ರಿಂದ ₹ 3ರಂತೆ 5 ಕೆ.ಜಿ.ಯಷ್ಟು ಆಹಾರ ಧಾನ್ಯವನ್ನು ಒದಗಿಸುತ್ತಿದೆ.ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯಗಳನ್ನು ಪಡೆಯುತ್ತಿವೆ. ಅಂತೆಯೇ ಬಡವರಿಗೆ ಪ್ರತಿ ಕೆ.ಜಿಗೆ ₹ 3ರಂತೆ ಅಕ್ಕಿಯನ್ನು ಹಾಗೂ ಪ್ರತಿ ಕೆ.ಜಿ.ಗೆ ₹ 2ರಂತೆ ಗೋಧಿಯನ್ನು ನೀಡಲಾಗುತ್ತಿದೆ.

ಈ ಮಧ್ಯೆ, ಕೇಂದ್ರ ಸರ್ಕಾರವು ಇದೇ ಡಿ. 31ಕ್ಕೆ ಮುಕ್ತಾಯವಾಗಲಿರುವಉಚಿತ ಪಡಿತರವನ್ನೊದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು(ಪಿಎಂಜಿಕೆಎವೈ) ವಿಸ್ತರಿಸದಿರಲು ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.