ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಸೇವಾವಧಿ ವಿಸ್ತರಣೆ

Published 3 ಆಗಸ್ಟ್ 2023, 13:09 IST
Last Updated 3 ಆಗಸ್ಟ್ 2023, 13:09 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಅವರ ಸೇವಾವಧಿಯನ್ನು ಮತ್ತೆ ಒಂದು ವರ್ಷ ವಿಸ್ತರಿಸಿದ್ದು, ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರವು ಗುರುವಾರ ನಿಯಮಗಳನ್ನು ಸಡಿಲಿಸಿದೆ.

ರಾಜೀವ್‌ ಅವರ ಅಧಿಕಾರಾವಧಿ ಇದೇ 30ರಂದು ಮುಕ್ತಾಯವಾಗುತ್ತಿತ್ತು. ಆದರೆ, ನಿಯಮಗಳನ್ನು ಸಡಿಲಿಸಿ ಮೂರನೇ ಬಾರಿಗೆ ವಿಸ್ತರಿಸಲಾಗಿದೆ.

ರಾಜೀವ್‌ ಅವರು ಈ ಮುನ್ನ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2019ರಲ್ಲಿ ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇಲ್ಲಿಯವರೆಗೆ, ಬಿ.ಡಿ. ಪಾಂಡೆ ಅವರು ಅತಿ ದೀರ್ಘಕಾಲದವರೆಗೆ (1972ರ ನವೆಂಬರ್‌ 2ರಿಂದ 1977ರ ಮಾರ್ಚ್‌ 31) ಸಂಪುಟ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಧಿಕಾರಿಯಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT