ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನಲ್ಲಿ ಮಣಿಪುರ ಗಲಭೆ ಸೇರಿದಂತೆ ಎಲ್ಲ ವಿಚಾರಗಳ ಚರ್ಚೆಗೆ ಸಿದ್ಧ: ಕೇಂದ್ರ ಸರ್ಕಾರ

Published 19 ಜುಲೈ 2023, 11:32 IST
Last Updated 19 ಜುಲೈ 2023, 11:32 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದ ಪರಿಸ್ಥಿತಿ ಸೇರಿ ಎಲ್ಲ ವಿಷಯಗಳನ್ನು ಚರ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ ಬುಧವಾರ ಹೇಳಿದ್ದಾರೆ.

ಗುರುವಾರದಿಂದ (ಜುಲೈ 20) ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನಿಯಮಗಳಡಿ ಅನುಮತಿಸಲಾದ ಮತ್ತು ಸ್ಪೀಕರ್‌ ಅನುಮೋದನೆ ನೀಡಿದ ಪ್ರತಿ ವಿಷಯವನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಚರ್ಚೆಗೆ 32 ವಿಷಯಗಳು ಬರಲಿವೆ ಎಂದು ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿರುವುದಾಗಿ ಜೋಷಿ ತಿಳಿಸಿದ್ದಾರೆ.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಕರೆದಿದ್ದ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಮಣಿಪುರದ ಹಿಂಸಾಚಾರದ ವಿಷಯವನ್ನು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದಾಗ, ಸಚಿವ ಜೋಷಿ ಅವರು ಈ ವಿಷಯವನ್ನೂ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT