ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವದ ಸಾಧಕ–ಬಾಧಕಗಳ ಕುರಿತು ಕಾಲಮಿತಿಯೊಳಗೆ ಸಲಹೆಗಳನ್ನು ನೀಡಲು ಸಮಿತಿಯನ್ನು ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ.

ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ಬುಧವಾರ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತ
ನಾಡಿದರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಸಮಿತಿಯಲ್ಲಿ ಯಾರು ಇರಬೇಕು ಎಂಬ ಬಗ್ಗೆ ಪ್ರಧಾನಿಯೇ ನಿರ್ಧರಿಸಲಿದ್ದಾರೆ’ ಎಂದರು.

‘ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾವಕ್ಕೆ ಬಹುತೇಕ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಏಕಕಾಲಕ್ಕೆ ಎರಡೂ ಕಡೆ ಚುನಾವಣೆ ನಡೆಸುವ ಬಗ್ಗೆ ಸಿಪಿಐ ಹಾಗೂ ಸಿಪಿಎಂ ಅಭಿಪ್ರಾಯ ಭೇದ ವ್ಯಕ್ತಪಡಿಸಿವೆಯೇ ವಿನಾ, ಪ್ರಸ್ತಾವವನ್ನು ತಿರಸ್ಕರಿಸಿಲ್ಲ’ ಎಂದು ರಾಜನಾಥ್ ಸ್ಪಷ್ಟಪಡಿಸಿದರು.

ಗೈರು: ಪ್ರಧಾನಿ ಕರೆದಿದ್ದ ಸರ್ವಪಕ್ಷ ಸಭೆಗೆ ಎನ್‌ಡಿಎ ಮಿತ್ರಪಕ್ಷ ಶಿವಸೇನಾ ಸೇರಿದಂತೆ ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಟಿಎಂಸಿ ಮೊದಲಾದ ಪಕ್ಷಗಳ ಪ್ರತಿನಿಧಿಗಳು ಹಾಜರಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.