ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇಐ ಕಾನೂನುಬಾಹಿರ ಸಂಘಟನೆ: ನಿರ್ಧರಿಸಲು ನ್ಯಾಯಮಂಡಳಿ ರಚನೆ

Published 14 ಮಾರ್ಚ್ 2024, 12:53 IST
Last Updated 14 ಮಾರ್ಚ್ 2024, 12:53 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿದ್ದ ಜಮಾತ್‌–ಎ-ಇಸ್ಲಾಮಿ (ಜೆಇಐ) ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ಇದಕ್ಕೆ ಪೂರಕವಾದ ಸಾಕ್ಷ್ಯಗಳಿವೆಯೇ ಎಂಬುದನ್ನು ನಿರ್ಧರಿಸಲು ಸರ್ಕಾರವು ಕಾನುನುಬಾಹಿರ ಚಟುವಟಿಕೆ (ನಿಯಂತ್ರಣ) ನ್ಯಾಯಮಂಡಳಿಯನ್ನು ರಚಿಸಿ, ಬುಧವಾರ ಅಧಿಸೂಚನೆ ಹೊರಡಿಸಿದೆ.

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ನವೀನ್‌ ಚಾವ್ಲಾ ನೇತೃತ್ವದಲ್ಲಿ ನ್ಯಾಯಮಂಡಳಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ಜೆಇಐ ಸಂಘಟನೆಗೆ ಭಯೋತ್ಪಾದಕ ಸಂಘಟನೆಗಳ ಜೊತೆಗೆ ಸಂಪರ್ಕವಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ ಎಂಬ ಹಿನ್ನೆಲೆಯಲ್ಲಿ ಐದು ವರ್ಷ ಅವಧಿಗೆ ನಿಷೇಧಿಸಿ ಕೇಂದ್ರ ಸರ್ಕಾರವು ಫೆಬ್ರುವರಿ 27ರಂದು ಅಧಿಸೂಚನೆ ಹೊರಡಿಸಿತ್ತು. ಅದರ ವಿರುದ್ಧ ಒಟ್ಟು 47 ಪ್ರಕರಣಗಳಿವೆ ಎಂದು ಉಲ್ಲೇಖಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT