ನವದೆಹಲಿ:ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷಾ ಕಿಟ್ ಬಳಸಿ ದೆಹಲಿಯ 6 ಲಕ್ಷ ಜನರ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯೋಜನೆ ಸಿದ್ಧಪಡಿಸಿದೆ.

ಈ ಸಂಬಂಧ, ಉತ್ತರ ಕೊರಿಯಾದಿಂದ ಆಮದು ಮಾಡಿಕೊಂಡಿರುವ50 ಸಾವಿರ ಕಿಟ್‌ಗಳನ್ನುದೆಹಲಿಗೆ ಸರಬರಾಜು ಮಾಡಲಾಗಿದೆ ಎಂದು ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಗುರುವಾರ ತಿಳಿಸಿದ್ದಾರೆ.

‘ದೆಹಲಿಯ ಆಸ್ಪತ್ರೆಗಳಲ್ಲಿ ಈಗಾಗಲೇ 431 ವೆಂಟಿಲೇಟರ್‌ಗಳಿದ್ದು, 500 ಹೆಚ್ಚುವರಿ ವೆಂಟಿಲೇಟರ್ ಮತ್ತು 650 ಆಂಬುಲೆನ್ಸ್ ಸೌಲಭ್ಯಗಳನ್ನು ಒದಗಿಸಲಿದೆ’ ಎಂದು ಹೇಳಿದರು.

‘ತಕ್ಷಣದಿಂದಲೇ ದೆಹಲಿಯಲ್ಲಿ 169 ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಅಲ್ಲಿ ರ್‍ಯಾಪಿಡ್ ಆ್ಯಂಟಿಜೆನ್ ಕಿಟ್ ಬಳಸಿ ಪರೀಕ್ಷೆ ನಡೆಸಲಾಗುವುದು. ಕಂಟೈನ್‌ಮೆಂಟ್ ಪ್ರದೇಶಗಳಲ್ಲಿನ ಜನರು ಮತ್ತು ಸೋಂಕು ದೃಢಪಟ್ಟಿರುವವರ ಸಂಬಂಧಿಗಳು ಈ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗಬಹುದು’ ಎಂದು ಸಚಿವರು ಹೇಳಿದ್ದಾರೆ.

‘ಕೊರೊನಾ ಸೋಂಕು ಏರುತ್ತಲೇ ಇರುವುದರಿಂದಜನರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ‘ ಎಂದು ತಿಳಿಸಿದ್ದಾರೆ.

ಸೋಂಕಿತರನ್ನು ಗುರುತಿಸುವ ಸಲುವಾಗಿ ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ವೈದ್ಯಕೀಯ ಸಮೀಕ್ಷೆಗಳನ್ನು ಪ್ರಾರಂಭಿಸಲಾಗಿದೆ. 242 ಕಂಟೈನ್‌ಮೆಂಟ್ ವಲಯಗಳಲ್ಲಿ ಒಟ್ಟು 2.30 ಲಕ್ಷ ಜನಸಂಖ್ಯೆಯಿದ್ದು, ಅವರಲ್ಲಿ 1.77 ಲಕ್ಷ ಜನರ ಸಮೀಕ್ಷೆಯನ್ನು ಈಗಾಗಲೇ ನಡೆಸಲಾಗಿದೆ.ಉಳಿದವರನ್ನು ಜೂನ್ 20ರೊಳಗೆ ಸಮೀಕ್ಷೆಗೆ ಒಳಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.