ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಲವ್ಯ ವಸತಿ ಶಾಲೆಗಳಿಗೆ 3 ವರ್ಷದಲ್ಲಿ 38 ಸಾವಿರ ಶಿಕ್ಷಕರ ನೇಮಕ: ಸಚಿವ ಅರ್ಜುನ್ ಮುಂಡಾ

Published 14 ಜೂನ್ 2023, 14:36 IST
Last Updated 14 ಜೂನ್ 2023, 14:36 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ (ಇಆರ್‌ಎಂಎಸ್‌) 38 ಸಾವಿರ ಶಿಕ್ಷಕರು ಮತ್ತು ಇತರ ಸಿಬ್ಬಂದಿಯನ್ನು  ಕೇಂದ್ರ ಸರ್ಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಬುಧವಾರ ತಿಳಿಸಿದರು.

ದೇಶದಾದ್ಯಂತ ಇರುವ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗಾಗಿ 1997–98ರಲ್ಲಿ ಇಂಥ ಶಾಲೆಗಳನ್ನು ಆರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇಂಥ ಶಾಲೆಗಳ ಸಂಖ್ಯೆ 109ರಿಂದ 401ಕ್ಕೆ ಏರಿಕೆಯಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘2025–26ರ ಒಳಗಾಗಿ ದೇಶದಾದ್ಯಂತ ನಿಗದಿತ 740 ಬ್ಲಾಕ್‌ಗಳಲ್ಲಿ ಇಎಂಆರ್‌ಎಸ್‌ ತೆರೆಯಲು ಸರ್ಕಾರ ಚಿಂತಿಸಿದೆ. ಈಗಾಗಲೇ 693 ಶಾಲೆಗಳು ಮಂಜೂರಾಗಿವೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT