ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯ ಬುಡಮೇಲು: ಖರ್ಗೆ

Published 4 ಫೆಬ್ರುವರಿ 2024, 14:59 IST
Last Updated 4 ಫೆಬ್ರುವರಿ 2024, 14:59 IST
ಅಕ್ಷರ ಗಾತ್ರ

ತ್ರಿಶೂರ್(ಕೇರಳ): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಮಧ್ಯಪ್ರವೇಶವು ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದ್ದು, ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲು ಮಾಡುತ್ತಿದೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಕಿರುಕುಳ ಕೊಡುವುದು ಮಾತ್ರವಲ್ಲದೆ, ದೇಶದ ಬಡಜನರು ಮತ್ತು ಮಹಿಳೆಯರನ್ನು ತುಳಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು(ಕೆಪಿಸಿಸಿ) ಏರ್ಪಡಿಸಿದ್ದ ಸಾರ್ವಜನಿಕ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದ್ದಾರೆ.

‘ರಾಜ್ಯಗಳ ಆಡಳಿತದಲ್ಲಿ ರಾಜ್ಯಪಾಲರು ಸೇರಿದಂತೆ ಕೇಂದ್ರದ ಹಸ್ತಕ್ಷೇಪ ಹಾಗೂ ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ಕುಗ್ಗಿಸುವ ಪ್ರಯತ್ನಗಳು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲಾಗಿಸುತ್ತಿವೆ’ ಎಂದು ಖರ್ಗೆ ಹೇಳಿದ್ದಾರೆ.

ಸಾಂವಿಧಾನಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಟ್ಟಾಗಿ ನಿಲ್ಲಬೇಕಿದೆ. ಯುಡಿಎಫ್ ಮೈತ್ರಿಕೂಟದ ಜೊತೆ ಕಾಂಗ್ರೆಸ್ ಪಕ್ಷವು ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಅಧಿಕ ಹಣದುಬ್ಬರ, ನಿರುದ್ಯೋಗವು ದೇಶದ ಬಡವರು, ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಜನಸಂಖ್ಯೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿವೆ. ಬಿಜೆಪಿ ಆಡಳಿತಾವಧಿಯಲ್ಲಿ ಸಂಪೂರ್ಣ ಸಾರ್ವಜನಿಕ ವಲಯವನ್ನು ಕಿತ್ತೊಗೆದು, ಖಾಸಗಿ ವಲಯಕ್ಕೆ ಪೂರ್ಣ ಬೆಂಬಲ ನೀಡುವ ಉದ್ದೇಶ ಹೊಂದಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿನ ನಿರುದ್ಯೋಗ ಮತ್ತು ಹಣದುಬ್ಬರದ ಸಂಯೋಜನೆಯು ಬಡವರ ಸಂಕಷ್ಟವನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT