ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಗಳಲ್ಲಿ ಆತಿಥ್ಯ: ಸಂಸದರಿಗೆ ಅನುಮತಿ ಕಡ್ಡಾಯ

Published 30 ನವೆಂಬರ್ 2023, 16:42 IST
Last Updated 30 ನವೆಂಬರ್ 2023, 16:42 IST
ಅಕ್ಷರ ಗಾತ್ರ

ನವದೆಹಲಿ: ಸಂಸದರು ಖಾಸಗಿಯಾಗಿ ವಿದೇಶಗಳಿಗೆ ತೆರಳಿದ ಸಂದರ್ಭಗಳಲ್ಲಿ, ಅಲ್ಲಿನ ಆತಿಥ್ಯ ಸ್ವೀಕರಿಸುವಾಗ ಕಠಿಣ ಮಾರ್ಗಸೂಚಿಗಳನ್ನು ಪಾಲಿಸಬೇಕು, ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು ಎಂದು ರಾಜ್ಯಸಭಾ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ಸಂಸದರು ನೀತಿಸಂಹಿತೆ ಪಾಲಿಸಬೇಕು, ಸಂಸದರಾಗಿ ತಾವು ನಿರ್ವಹಿಸಬೇಕಿರುವ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿ ಉಂಟುಮಾಡಬಹುದಾದ ಉಡುಗೊರೆಗಳನ್ನು ಪಡೆಯಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

ವಿದೇಶಗಳಿಂದ ಬರುವ ಆಹ್ವಾನವನ್ನು ಸಂಸದರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಗಮನಕ್ಕೆ ತರಬೇಕು ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT