ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ಚಕ್ಕಾ ಜಾಮ್‌: ದೆಹಲಿಯ ಗಡಿಗಳಲ್ಲಿ ಮತ್ತೆ ಇಂಟರ್ನೆಟ್‌ ಸ್ಥಗಿತ

Last Updated 6 ಫೆಬ್ರುವರಿ 2021, 11:17 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್‌ ಸೇವೆಯನ್ನು ಮತ್ತೊಮ್ಮೆ ಕಡಿತಗೊಳಿಸಲಾಗಿದೆ.

ರೈತರು ದೇಶದಾದ್ಯಂತ 'ಚಕ್ಕಾ ಜಾಮ್‌' ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು (ಫೆಬ್ರುವರಿ 06) ರಾತ್ರಿ 11:59 ಗಂಟೆ ವರೆಗೂ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಗೃಹ ಇಲಾಖೆಯು, 'ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಸಿಂಘು, ಘಾಜಿಪುರ, ಟಿಕ್ರಿ ಮತ್ತು ಅವುಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್‌ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ' ಎಂದು ಸ್ಪಷ್ಟನೆ ನೀಡಿದೆ.

ದೆಹಲಿಯ ಟಿಕ್ರಿ, ಸಿಂಘು ಮತ್ತು ಘಾಜಿಪುರ್‌ ಗಡಿ ಪ್ರದೇಶಗಳಲ್ಲಿ ಜನವರಿ 29ರ ರಾತ್ರಿ 11ರಿಂದ ಜನವರಿ 31ರ ರಾತ್ರಿ 11ರ ವರೆಗೂ ತಾತ್ಕಾಲಿಕವಾಗಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಈ ಕ್ರಮವನ್ನು ಫೆಬ್ರವರಿ 2ರ ರಾತ್ರಿ 11 ಗಂಟೆ ವರೆಗೆ ವಿಸ್ತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT