ಗುಂಡ್ಲುಪೇಟೆ: ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ದೊಡ್ಡಹುಂಡಿ ಗ್ರಾಮದ ದಿ.ನಾಗರಾಜು ಹಾಗೂ ನಾಗರತ್ನಾ ದಂಪತಿಯ ಪುತ್ರ ಮನೋಜ್ ಕುಮಾರ್ (10) ಮೃತ ವಿದ್ಯಾರ್ಥ. ಬುಧವಾರ ಶಾಲೆಯಲ್ಲಿ ಪಾಠ ಕೇಳುವಾಗ ಏಕಾಏಕಿ ಕುಸಿದು ಬಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕನಿಗೆ ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಪತಿಯನ್ನು ಕಳೆದುಕೊಂಡಿದ್ದ ನಾಗರತ್ನಾ ಕೂಲಿ ಮಾಡಿ ಮಗನನ್ನು ಓದಿಸುತ್ತಿದ್ದರು. ಇದೀಗ ಪುತ್ರನನ್ನು ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.