ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಶಿಮಠ: ಸಂತ್ರಸ್ತರಿಗಾಗಿ ಪುನರ್ವಸತಿ ಪ್ಯಾಕೇಜ್‌

Last Updated 14 ಜನವರಿ 2023, 13:31 IST
ಅಕ್ಷರ ಗಾತ್ರ

ಡೆಹ್ರಾಡೂನ್‌ (ಪಿಟಿಐ): ‘ಜೋಶಿಮಠ ಪಟ್ಟಣದಲ್ಲಿ ಉಂಟಾಗಿರುವ ಭೂಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿರುವ ನಾಗರಿಕರ ಹಿತ ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಪುನರ್ವಸತಿ ಪ್ಯಾಕೇಜ್‌ ಸಿದ್ಧಪಡಿಸುತ್ತಿದೆ’ ಎಂದು ಚಮೋಲಿ ಜಿಲ್ಲಾಧಿಕಾರಿ ಹಿಮಾಂಶು ಖುರಾನ ಶನಿವಾರ ಹೇಳಿದ್ದಾರೆ.

ಖುರಾನ ಅವರು ಶುಕ್ರವಾರ ರಾತ್ರಿ ಸಂತ್ರಸ್ತರ ಶಿಬಿರಗಳಿಗೆ ಭೇಟಿ ನೀಡಿ ನೊಂದವರ ಅಹವಾಲು ಆಲಿಸಿದ ಬಳಿಕ ಈ ಹೇಳಿಕೆ ನೀಡಿದ್ದಾರೆ.

‘ಸಂತ್ರಸ್ತರೊಂದಿಗೆ ಚರ್ಚಿಸಿದ್ದೇನೆ. ಈ ವೇಳೆ ಕೆಲವರು ಹಣಕಾಸಿನ ನೆರವು ಒದಗಿಸುವಂತೆ ಕೇಳಿದ್ದಾರೆ. ನಿವೇಶನ ಕಳೆದುಕೊಂಡವರು ಬೇರೆಡೆ ನಿವೇಶನ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನೂ ಕೆಲವರು ಜೋಶಿಮಠದಲ್ಲೇ ಸುರಕ್ಷಿತವಾಗಿರುವ ಸ್ಥಳಕ್ಕೆ ತಮ್ಮನ್ನು ಸ್ಥಳಾಂತರಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಪುನರ್ವಸತಿ ಪ್ಯಾಕೇಜ್‌ ಸಿದ್ಧಪಡಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಬಾಧಿತರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ. ಈವರೆಗೂ 185 ಕುಟುಂಬಗಳನ್ನು ಸಂತ್ರಸ್ತರ ಶಿಬಿರಗಳಿಗೆ ಕಳುಹಿಸಲಾಗಿದೆ. ಒಟ್ಟು 760 ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಪೈಕಿ 147 ಮನೆಗಳನ್ನು ಅಸುರಕ್ಷಿತ ಎಂದು ಗುರುತಿಸಲಾಗಿದೆ’ ಎಂದು ಚಮೋಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT