ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

Published : 14 ಸೆಪ್ಟೆಂಬರ್ 2024, 3:01 IST
Last Updated : 14 ಸೆಪ್ಟೆಂಬರ್ 2024, 3:01 IST
ಫಾಲೋ ಮಾಡಿ
Comments

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್‌ ಆಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ.

ಭೂಕುಸಿತ ಉಂಟಾಗಿ ಬೆಟ್ಟಗಳಿಂದ ಕಲ್ಲುಗಳು ಉರುಳಿ ರಸ್ತೆಗಳ ಮೇಲೆ ಬಿದ್ದಿರುವ ಪರಿಣಾಮ ಲಂಬಗಡ, ನಂದಪ್ರಯಾಗ, ಸೋನಾಳ ಮತ್ತು ಬ್ಯಾರೇಜ್ ಕುಂಜ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿ ತಿಳಿಸಿದೆ.

ಸಾಕೋಟ್-ನಂದಪ್ರಯಾಗ ನಡುವಿನ ಮಾರ್ಗವನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತ ಕಾಮೇದಾ ಬಳಿಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಚಮೋಲಿ ಪೊಲೀಸರು ತಿಳಿಸಿದ್ದಾರೆ.

ಈಚೆಗೆ ಕೇದಾರನಾಥದ ಬಳಿಯ ಲಿಂಚೋಲಿಯಲ್ಲಿನ ಶಿಬಿರದಲ್ಲಿ ಭೂಕುಸಿತ ಸಂಭವಿಸಿತ್ತು. ನೇಪಾಳದ 26 ವರ್ಷದ ಕಲು ಬಹದ್ದೂರ್ ಎಂಬುವವರು ಮೃತಪಟ್ಟಿದ್ದರು. ಋಷಿಕೇಶದ ಶಿವಮಂದಿರ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಲ್ಲಿ ಎರಡು ಶವಗಳು ಪತ್ತೆಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT