ಚಂಡೀಗಡ: ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ಹಿಂದುರುಗಿದ ಚಂಡೀಗಡದ 39 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಸೋಮವಾರ ದೃಢ ಪಟ್ಟಿದೆ.

ಅಪಾಯಕಾರಿಯಾಗಿ ಪರಿಣಮಿಸಿರುವ ಕೋವಿಡ್‌ನ ನೂತನ ರೂಪಾಂತರ ಓಮೈಕ್ರಾನ್ ಸೋಂಕು ತಗುಲಿರುವ ಸಾಧ್ಯತೆ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚುವರಿ ಪರೀಕ್ಷೆಗಾಗಿ ಆತನ ಮಾದರಿಯನ್ನು ಹೆಚ್ಚಿನ ಪರೀಕ್ಷೆಗೆ ದಿಲ್ಲಿಗೆ ಕಳುಹಿಸಲಾಗಿದೆ.

ನವೆಂಬರ್ 21ಕ್ಕೆ ಚಂಡೀಗಡಕ್ಕೆ ವಾಪಸ್ ಆದ ಸಂದರ್ಭ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿತ್ತು. ಆತನ ಕುಟುಂಬದ ಓರ್ವ ಸದಸ್ಯನಿಗೆ ಮತ್ತು ಮನೆಯ ಕೆಲಸದ ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ ವಾರ ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ರೂಪಾಂತರ ಬಿ.1.1.529 ಅಥವಾ ಓಮೈಕ್ರಾನ್ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು 'ಆತಂಕಕಾರಿ ರೂಪಾಂತರ' ಎಂದು ಗುರುತಿಸಿದೆ.

ಓಮೈಕ್ರಾನ್ ಕಳವಳ: ‘ದೇಶದಲ್ಲಿ ಒಂದು ಪ್ರಕರಣವೂ ದೃಢಪಟ್ಟಿಲ್ಲ’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.