ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಢ: ಮೇಯರ್ ಮನೋಜ್‌ ಸೋನ್‌ಕರ್ ರಾಜೀನಾಮೆ

Published 18 ಫೆಬ್ರುವರಿ 2024, 20:48 IST
Last Updated 18 ಫೆಬ್ರುವರಿ 2024, 20:48 IST
ಅಕ್ಷರ ಗಾತ್ರ

ಚಂಡೀಗಢ: ಚಂಡೀಗಢದ ನೂತನ ಮೇಯರ್ ಮನೋಜ್‌ ಸೋನ್‌ಕರ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಜನವರಿ 30ರಂದು ನಡೆದ ಮೇಯರ್‌ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಕುರಿತು ಆರೋಪಗಳು ಕೇಳಿಬಂದಿದ್ದವು. ಅಲ್ಲದೇ, ಈ ವಿಚಾರವಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ.  

ಕಾಂಗ್ರೆಸ್‌–ಎಎಪಿ ಮೈತ್ರಿ ಮಾಡಿಕೊಂಡಿದ್ದರೂ, ಬಿಜೆಪಿ ಅಭ್ಯರ್ಥಿಯಾಗಿದ್ದ ಮನೋಜ್‌ ಸೋನ್‌ಕರ್ ಆಯ್ಕೆಯಾಗಿದ್ದರು. 

‘ಪಕ್ಷಗಳು ನೇಮಿಸಿದ್ದ ಸದಸ್ಯರಿಗೆ ಮತ ಎಣಿಕೆ ಪ್ರಕ್ರಿಯೆಯನ್ನು ಗಮನಿಸಿಕೊಳ್ಳಲು ಚುನಾವಣಾಧಿಕಾರಿ ಅವಕಾಶ ನೀಡಿರಲಿಲ್ಲ’ ಎಂದು ಆರೋಪಿಸಿ ಎಎಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT